ವಿಜಯಪುರ: ಜಿಲ್ಲೆಯಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಐದು ದಿನ ಕಳೆದಿದ್ದು ಇಲ್ಲಿಯವರೆಗೆ 3,541 ವಿದ್ಯಾರ್ಥಿಗಳು ಕೊರೊನಾ ಟೆಸ್ಟ್ಗೆ ಒಳಗಾಗಿದ್ದಾರೆ. ಅವರಲ್ಲಿ 10 ವಿದ್ಯಾರ್ಥಿಗಳಿಗೆ ಹಾಗೂ 373 ಶಿಕ್ಷಕರಲ್ಲಿ 23 ಜನರಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.
ಪಾಸಿಟಿವ್ ಬಂದ 10 ವಿದ್ಯಾರ್ಥಿಗಳನ್ನು ಹಾಗೂ 23 ಶಿಕ್ಷಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಜೊತೆ ಸಂಪರ್ಕ ಇರುವ ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ಸಹ ಕಡ್ಡಾಯವಾಗಿ ಹೋಮ್ ಕ್ವಾರೈಂಟೆನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.