ವಿಜಯಪುರ: ಕೊರೊನಾ ತಡೆಗೆ ನಿತ್ಯ ಒಂದಿಲ್ಲೊಂದು ಸಭೆ ನಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿಗೂ ಸದ್ಯ ಕೊರೊನಾ ವಕ್ಕರಿಸಿದೆ.
ಡಿಸಿ ಕಚೇರಿ ಸಿಬ್ಬಂದಿಗೂ ಕೊರೊನಾ ಸೋಂಕು - Vijayapura corona news
ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ವ್ಯಾಪ್ತಿಯಲ್ಲಿ ಔಷಧಿ ಸಿಂಪಡಣೆ ಮಾಡಲಾಗಿದೆ ಮತ್ತು ಅವಶ್ಯಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ..
![ಡಿಸಿ ಕಚೇರಿ ಸಿಬ್ಬಂದಿಗೂ ಕೊರೊನಾ ಸೋಂಕು Corona for staff of vijayapura DC office](https://etvbharatimages.akamaized.net/etvbharat/prod-images/768-512-08:00:51:1595773851-kn-vjp-06-dc-office-postive-av-7202140-26072020200013-2607f-1595773813-696.jpg)
Corona for staff of vijayapura DC office
ಜಿಲ್ಲಾಧಿಕಾರಿ ಕಚೇರಿಯ ಓರ್ವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಸ್ಪಷ್ಟಪಡಿಸಿದ್ದಾರೆ. P-94569 (38 ವರ್ಷದ ಪುರುಷ) ಸೋಂಕು ತಗುಲಿರುವ ವ್ಯಕ್ತಿ.
ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ವ್ಯಾಪ್ತಿಯಲ್ಲಿ ಔಷಧಿ ಸಿಂಪಡಣೆ ಮಾಡಲಾಗಿದೆ ಮತ್ತು ಅವಶ್ಯಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ. ಸೋಮವಾರದಿಂದ ಎಂದಿನಂತೆ ಕಚೇರಿ ಕಾರ್ಯ ನಿರ್ವಹಿಸಲಿದೆ.