ವಿಜಯಪುರ: ಮದುಮಗನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮದುವೆ ಮುಂದೂಡಿದ ಪ್ರಸಂಗ ಜಿಲ್ಲೆಯಲ್ಲಿ ನಡೆದಿದೆ. ರೋಗಿ ಸಂಖ್ಯೆ 12,140 ಆದ 26 ವರ್ಷದ ಪೊಲೀಸ್ ಕಾನ್ಸ್ಟೇಬಲ್ಗೆ ಸೋಂಕು ಪತ್ತೆಯಾಗಿದ್ದರಿಂದ ಅವರ ಮದುವೆ ಕಾರ್ಯ ಮುಂದೂಡಿಕೆಯಾಗಿದೆ.
ವಿಜಯಪುರದಲ್ಲಿ ಪೊಲೀಸ್ಗೆ ಕೊರೊನಾ... ಮದುವೆ ಮುಂದೂಡಿಕೆ, ಮದುಮಗಳಿಗೆ ಕ್ವಾರಂಟೈನ್..! - ವಿಜಯಪುರದಲ್ಲಿ ಕೊರೊನಾ
ಪೊಲೀಸ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರ ಮದುವೆ ಮುಂದೂಡಿಕೆಯಾದ ಘಟನೆ ವಿಜಯಪುರದಲ್ಲಿ ನಡೆದಿದೆ. ಅಲ್ಲದೆ, ಮದುಮಗಳನ್ನು ಕ್ವಾರಂಟೈನ್ ಮಾಡಲಾಗಿದೆ.

ವಿಜಯಪುರ ಕೊರೊನಾ
ವಿಜಯಪುರದಲ್ಲಿ ಪೊಲೀಸ್ ಕಾನ್ಸ್ಟೇಬಲ್ಗೆ ಕೊರೊನಾ
ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಕಾನ್ಸ್ಟೇಬಲ್ನಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಕಾರಣ ಆರೋಗ್ಯ ಇಲಾಖೆಯಿಂದ ಸೋಂಕು ಪತ್ತೆ ಪರೀಕ್ಷೆ ನಡೆದಿತ್ತು. ಈಗ ಕೊರೊನಾ ದೃಢಪಟ್ಟ ಕಾರಣ ಮದುವೆಯನ್ನು ಮುಂದೂಡಲಾಗಿದೆ.
ಮದುವೆ ಮುಂದೂಡುವಂತೆ ಜಿಲ್ಲಾಡಳಿತ ಕುಟುಂಬಸ್ಥರಿಗೆ ತಿಳಿಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಮದುಮಗ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಸಂಪರ್ಕಕ್ಕೆ ಬಂದಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ. ವಧುವಿಗೂ ಕೂಡಾ ಕ್ವಾರಂಟೈನ್ ಮಾಡಲಾಗಿದೆ.