ವಿಜಯಪುರ: ಸಿಇಟಿ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆದಿದ್ದು, ಓರ್ವ ಕೊರೊನಾ ಸೋಂಕಿತ ವಿದ್ಯಾರ್ಥಿ ಸಹ ಪ್ರತ್ಯೇಕವಾಗಿ ಪರೀಕ್ಷೆ ಬರೆದಿದ್ದಾನೆ.
ವಿಜಯಪುರ: ಸಿಇಟಿ ಪರೀಕ್ಷೆಗೆ ಕೊರೊನಾ ಸೋಂಕಿತ ವಿದ್ಯಾರ್ಥಿ ಹಾಜರು
ಸಿಇಟಿ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಯಲು ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ ಓರ್ವ ಕೊರೊನಾ ಸೋಂಕಿತ ವಿದ್ಯಾರ್ಥಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ಬರೆದಿದ್ದಾನೆ.
Corona infected student attended the CET exam
ಜಿಲ್ಲೆಯಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ವಿಜಯಪುರ ನಗರದಲ್ಲಿ 14, ಇಂಡಿ, ಸಿಂದಗಿ, ಮುದ್ದೇಬಿಹಾಳಗಳಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. ಈ ಬಾರಿ ಒಟ್ಟು 7992 ವಿದ್ಯಾರ್ಥಿಗಳಿಂದ ಸಿಇಟಿಗೆ ಅರ್ಜಿ ಸಲ್ಲಿಕೆಯಾಗಿತ್ತು.
ಸಿಇಟಿ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಯಲು ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಂಡಿತ್ತು. ಓರ್ವ ಕೊರೊನಾ ಪಾಸಿಟಿವ್ ವಿದ್ಯಾರ್ಥಿಯಿಂದಲೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದ್ದು, ಆತನಿಗೆ ಪ್ರತ್ಯೇಕ ಕೋಣೆಯ ವ್ಯವಸ್ಥೆ ಮಾಡಲಾಗಿತ್ತು.