ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿಂದು ಒಂದು ಕೊರೊನಾ ಪ್ರಕರಣ ಪತ್ತೆ: 6 ಮಂದಿ ಗುಣಮುಖ - Vijayapura corona news

ವಿಜಯಪುರ ಜಿಲ್ಲೆಯಲ್ಲಿಂದು ಒಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಇಂದು 6 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾಸ್ಪತ್ರೆ ವಿಜಯಪುರ
ಜಿಲ್ಲಾಸ್ಪತ್ರೆ ವಿಜಯಪುರ

By

Published : Jul 9, 2020, 9:10 PM IST

ವಿಜಯಪುರ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 621ಕ್ಕೆ ಏರಿಕೆಯಾಗಿದೆ. ಇಂದು 6 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇವರ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.

ಇನ್ನೂ 158 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 13 ಜನ ಸಾವನ್ನಪ್ಪಿದ್ದು, ಇಂದು 31 ವರ್ಷದ ಪುರುಷನಲ್ಲಿ ಪಾಸಿಟಿವ್ ಕಂಡು ಬಂದಿದೆ. ಈತ ಜ್ವರ ಹಾಗೂ ನೆಗಡಿಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ. ಸ್ವ್ಯಾಬ್ ಟೆಸ್ಟ್​ಗೆ ಕಳುಹಿಸಿದಾಗ ಪಾಸಿಟಿವ್ ಬಂದಿದೆ.

ಇಲ್ಲಿಯವರೆಗೆ 31,278 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 28,445 ಜನರ ವರದಿ ನೆಗೆಟಿವ್ ಬಂದಿದೆ. 621 ಪಾಸಿಟಿವ್ ಬಂದಿದೆ. ಇನ್ನೂ 2,212 ಟೆಸ್ಟ್ ವರದಿ ಬರಬೇಕಾಗಿದೆ. ಇಲ್ಲಿಯವರೆಗೆ 1378 ಜನ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. 38,712 ಜನರ ಮೇಲೆ ನಿಗಾ ವಹಿಸಲಾಗಿದೆ.

ABOUT THE AUTHOR

...view details