ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿಂದು 102 ಮಂದಿಗೆ ಕೊರೊನಾ..90 ಜನರು ಗುಣಮುಖ - Vijayapura corona infected

ವಿಜಯಪುರದಲ್ಲಿಂದು ಜಿಲ್ಲೆಯಲ್ಲಿಂದು 102 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 90 ಸೋಂಕಿತರು ಸಂಪೂರ್ಣ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

Corona positive for 102 people in Vijayapur district
ವಿಜಯಪುರದಲ್ಲಿಂದು 102 ಮಂದಿಗೆ ಕೊರೊನಾ..90 ಜನರು ಗುಣಮುಖ

By

Published : Sep 21, 2020, 8:32 PM IST

ವಿಜಯಪುರ: ಜಿಲ್ಲೆಯಲ್ಲಿಂದು 102 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,635ಕ್ಕೆ ಏರಿಕೆಯಾಗಿದೆ.

ಇಂದು 90 ಸೋಂಕಿತರು ಸಂಪೂರ್ಣ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 7,686 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 148ಕ್ಕೆ ಏರಿಕೆಯಾಗಿದೆ. ಸದ್ಯ 801 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ.

ಈವರೆಗೆ ಒಟ್ಟು 86,243 ಜನರ ಮೇಲೆ ನಿಗಾ ಇಡಲಾಗಿದ್ದು, 96,056 ಜನರ ಗಂಟಲು ದ್ರವದ ಮಾದರಿ ಪಡೆಯಲಾಗಿದೆ. ಇವರಲ್ಲಿ 86,026 ಜನರ ವರದಿ ನೆಗಟಿವ್ ಬಂದಿದ್ದು, 8,635 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನೂ 1,397 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​ ಕುಮಾರ್​ ತಿಳಿಸಿದ್ದಾರೆ.

ABOUT THE AUTHOR

...view details