ವಿಜಯಪುರ: ಜಿಲ್ಲೆಯಲ್ಲಿಂದು 132 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,295ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ.
ವಿಜಯಪುರದಲ್ಲಿಂದು 132 ಮಂದಿಗೆ ಕೊರೊನಾ.. ವೃದ್ಧ ಸಾವು - Vijayapura News
ವಿಜಯಪುರ ಜಿಲ್ಲೆಯಲ್ಲಿಂದು 132 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಓರ್ವ ವೃದ್ದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ.
ನಗರದ ಮೀನಾಕ್ಷಿ ಚೌಕ್ ನಿವಾಸಿ 76 ವರ್ಷದ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇವರು ಕೆಮ್ಮು, ತೀವ್ರ ಉಸಿರಾಟ ತೊಂದರೆ ಹಾಗೂ ಕಳೆದ 4 ವರ್ಷಗಳಿಂದ ರಕ್ತದೊತ್ತಡದಿಂದ ಬಳಲುತ್ತಿದ್ದರು. ವೃದ್ದನ ಅಂತ್ಯಸಂಸ್ಕಾರವನ್ನು ಸರ್ಕಾರದ ಮಾರ್ಗಸೂಚಿಯಂತೆ ನೆರವೇರಿಸಲಾಗಿದೆ. ಇಂದು ಸೋಂಕಿನಿಂದ 143 ಜನ ಗುಣಮುಖರಾಗಿದ್ದು, ಇಲ್ಲಿಯವರೆಗೆ 1,724 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಲ್ಲಿಯವರೆಗೆ ಒಟ್ಟು 40,381 ಜನರ ಮೇಲೆ ನಿಗಾ ಇಡಲಾಗಿದ್ದು, ಅವರಲ್ಲಿ 41,248 ಜನರ ಗಂಟಲು ದ್ರವ ಪಡೆದುಕೊಳ್ಳಲಾಗಿದೆ. ಇವರಲ್ಲಿ 38,410 ಜನರ ವರದಿ ನೆಗೆಟಿವ್ ಹಾಗೂ 2,295 ಮಂದಿಯ ವರದಿ ಪಾಸಿಟಿವ್ ಬಂದಿದೆ. ಇನ್ನೂ 543 ಜನರ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಈವರೆಗೆ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.