ವಿಜಯಪುರ:ಜಿಲ್ಲೆಯಲ್ಲಿಂದು 143 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಓರ್ವ ಕೊರೊನಾಗೆ ಬಲಿಯಾಗಿದ್ದಾನೆ.
ವಿಜಯಪುರ: 143 ಮಂದಿಗೆ ವಕ್ಕರಿಸಿದ ಕೊರೊನಾ... 167 ಜನರು ಡಿಸ್ಚಾರ್ಜ್ - Vijayapura Corona Case
ವಿಜಯಪುರ ಜಿಲ್ಲೆಯಲ್ಲಿಂದು 143 ಮಂದಿಗೆ ಕೊರೊನಾ ದೃಢಪಟ್ಟಿದ್ದು, 167 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಗಸ್ಟ್ 6 ರಂದು ಆಸ್ಪತ್ರೆಗೆ ದಾಖಲಾಗಿದ್ದ 55 ವರ್ಷದ ವ್ಯಕ್ತಿ (ಪಿ-167277) ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮೃತರ ಸಂಖ್ಯೆ 41ಕ್ಕೆ ಏರಿದೆ. ಇವರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ಮಾಡಲಾಗಿದೆ. ಇಂದು 167 ಮಂದಿ ಸೇರಿ ಇಲ್ಲಿಯವರೆಗೆ ಒಟ್ಟು 2,691 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನೂ 973 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿಯವರೆಗೆ 42,425 ಜನರ ಮೇಲೆ ನಿಗಾ ಇಡಲಾಗಿದ್ದು, 53,843 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 48,982 ಜನರ ವರದಿ ನೆಗಟಿವ್ ವರದಿ ಬಂದಿದ್ದು, 3,705 ಜನರ ವರದಿ ಪಾಸಿಟಿವ್ ಬಂದಿದೆ. ಇನ್ನೂ 1,155 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.