ವಿಜಯಪುರ:ಜಿಲ್ಲೆಯಲ್ಲಿಂದು 81 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8533ಕ್ಕೆ ಏರಿಕೆಯಾಗಿದೆ.
ವಿಜಯಪುರದಲ್ಲಿಂದು 81 ಮಂದಿಗೆ ಕೊರೊನಾ... 102 ಜನರು ಗುಣಮುಖ - Vijayapura corona death
ವಿಜಯಪುರದಲ್ಲಿಂದು 81 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 102 ಜನರು ಸಂಪೂರ್ಣ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಇಂದು 102 ಜನರು ಸಂಪೂರ್ಣ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 7,596 ಜನರು ಗುಣಮುಖರಾಗಿದ್ದಾರೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ. ಸದ್ಯ 791 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ.
ಇಲ್ಲಿಯವರೆಗೆ 82,968 ಜನರ ಮೇಲೆ ನಿಗಾ ಇಡಲಾಗಿದೆ. 95,781 ಜನರ ಗಂಟಲು ದ್ರವದ ಮಾದರಿ ಪಡೆಯಲಾಗಿದ್ದು, ಇವರಲ್ಲಿ 85,534ಜನರ ವರದಿ ನೆಗಟಿವ್ ಬಂದಿದೆ. 8533 ಜನರಿಗೆ ಕೊರೊನಾ ದೃಢಪಟ್ಟಿದೆ. ಇನ್ನೂ 1690 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.