ವಿಜಯಪುರ: ಜಿಲ್ಲೆಯಲ್ಲಿ ಇಂದು 58 ಹೊಸದಾಗಿ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 7,720ಕ್ಕೆ ಏರಿಕೆಯಾಗಿದೆ.
ವಿಜಯಪುರ: ಇಂದು 58 ಜನರಲ್ಲಿ ಕೊರೊನಾ ಪಾಸಿಟಿವ್ ದೃಢ - vijaypura corona news
ವಿಜಯಪುರ ಜಿಲ್ಲೆಯಲ್ಲಿ ಇಂದು 58 ಹೊಸದಾಗಿ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ ವರದಿಯಾಗಿದೆ.
![ವಿಜಯಪುರ: ಇಂದು 58 ಜನರಲ್ಲಿ ಕೊರೊನಾ ಪಾಸಿಟಿವ್ ದೃಢ Vijayapura](https://etvbharatimages.akamaized.net/etvbharat/prod-images/768-512-8780044-859-8780044-1599926105940.jpg)
ಇಂದು ಕೊರೊನಾದಿಂದ 73 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 6,955ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 133ಕ್ಕೆ ಏರಿಕೆಯಾಗಿದೆ. ಮೃತನ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಯಿತು.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 632 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 65,175 ಜನರ ಮೇಲೆ ನಿಗಾ ಇಡಲಾಗಿದೆ. 85,736 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 77,306 ಜನರ ವರದಿ ನೆಗಟಿವ್ ಆಗಿದೆ. 7,720 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನು 710 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ ತಿಳಿಸಿದ್ದಾರೆ.