ವಿಜಯಪುರ: ಜಿಲ್ಲಾಸ್ಪತ್ರೆ ವಾರ್ಡ್ನಿಂದ ಜಿಗಿದು ಕೊರೊನಾದಿಂದ ಗುಣಮುಖವಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊರವಲಯದಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಬಸವನಬಾಗೇವಾಡಿ ತಾಲೂಕಿನ ಸಿದ್ನಾಳ ಗ್ರಾಮದ ಸುಭಾಷ ಅಂಗಡಿ (56) ಆತ್ಮಹತ್ಯೆಗೆ ಶರಣಾದವರು. ಇವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲಾಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಇವರು ಕೊರೊನಾದಿಂದ ಗುಣಮುಖರಾಗಿದ್ದರು. ಆದ್ರೂ ಸಹ ಅವರು ರೋಗದಿಂದಾಗಿ ಮಾನಸಿಕವಾಗಿ ನೋಂದಿದ್ದರು ಎನ್ನಲಾಗಿದೆ.