ವಿಜಯಪುರ:ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದ್ದು, 2020 ನವೆಂಬರ್ 11ರಿಂದ ಇಲ್ಲಿಯವರೆಗೆ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿ ಸೇರಿ 52,638 ಜನರ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದೆ. ಅವುಗಳಲ್ಲಿ 173 ವಿದ್ಯಾರ್ಥಿಗಳ ಹಾಗೂ 46 ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ವರದಿ ಸೇರಿ 219 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಲಕ್ಷಣ ಇಲ್ಲದ ಕಾರಣ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಶಾಲೆ, ಕಾಲೇಜ್ ಹಾಗೂ ವಿಶ್ವವಿದ್ಯಾಲಯದ 45,198 ವಿದ್ಯಾರ್ಥಿಗಳಲ್ಲಿ 173 ವಿದ್ಯಾರ್ಥಿಗಳ ಗಂಟಲು ದ್ರವದ ಪರೀಕ್ಷೆ ಪಾಸಿಟಿವ್ ದೃಢಪಟ್ಟಿದೆ.