ವಿಜಯಪುರ: ಜಿಲ್ಲೆಯಲ್ಲಿ ಎಂಟು ಜನರಿಗೆ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆ ಅವರ ಗಂಟಲು ದ್ರವ ಹಾಗೂ ರಕ್ತ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದರು.
ಜಿಲ್ಲೆಯಲ್ಲಿ 8 ಜನರಲ್ಲಿ ಕೊರೊನಾ ಸೋಂಕು ಲಕ್ಷಣ: ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ - ಕೊರೊನಾ ಸೋಂಕಿನ ಲಕ್ಷಣ ಪತ್ತೆ
ವಿಜಯಪುರದಲ್ಲಿ ಇಂದು ಎಂಟು ಜನರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿದ್ದು, ಅವರ ಗಂಟಲು ದ್ರವ ಮತ್ತು ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದರು.
ಕೆಲ ದಿನಗಳಿಂದ ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳು ಇವರಲ್ಲಿ ಕಂಡು ಬಂದಿದೆ. ಕಾಸರಗೋಡು ಹಾಗೂ ಮಂಗಳೂರಿನಿಂದ ಬಂದ ಕೆಲವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತದೆ. ಸೋಂಕಿನ ಲಕ್ಷಣ ಕಂಡು ಬಂದ ಎಲ್ಲರ ಗಂಟಲು ದ್ರವ ಹಾಗೂ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಒದಗಿಸಿದರು.
ಒಟ್ಟು 422 ಶಂಕಿತ ಸೋಂಕಿತರನ್ನು ವಿಶೇಷ ನಿಗಾದಲ್ಲಿ ಇರಿಸಲಾಗಿದೆ. ಅದರಲ್ಲಿ ಸದ್ಯಕ್ಕೆ 31 ಜನ ಮಾತ್ರ ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ. ಇದುವರೆಗೂ 63 ಶಂಕಿತರ ಮಾದರಿಗಳನ್ನು ಕಳುಹಿಸಲಾಗಿತ್ತು. ಅದರಲ್ಲಿ 61 ವರದಿ ಬಂದಿವೆ. ಎಲ್ಲವೂ ನೆಗೆಟಿವ್ ಇವೆ ಎಂದು ಸ್ಪಷ್ಟಪಡಿಸಿದರು. ಈಗಾಗಲೇ ಕಳುಹಿಸಿರುವ ಮಾದರಿಗಳಲ್ಲಿ ಎರಡರ ವರದಿಗಳು ಮಾತ್ರ ಬಾಕಿ ಇವೆ ಎಂದರು.