ವಿಜಯಪುರ: ಜಿಲ್ಲೆಯಲ್ಲಿ ಇಂದು 57 ಜನರಿಗೆ ಹೊಸದಾಗಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ಇಲ್ಲಿವರೆಗೆ ಜಿಲ್ಲೆಯಲ್ಲಿ 7507 ಜನರಿಗೆ ಸೋಂಕು ತಗುಲಿದೆ.ಇಂದು ಕೊರೊನಾದಿಂದ 21 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 6731 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 127 ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 649 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ವಿಜಯಪುರದಲ್ಲಿ ಇಂದು 57 ಜನರಿಗೆ ಸೋಂಕು....ಕಡಿಮೆಯಾದ ಪಾಸಿಟಿವ್ ಪ್ರಕರಣ! - ವಿಜಯಪುರದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು
ಇಂದು ವಿಜಯಪುರದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕೊಂಚ ಇಳಿಕೆ ಕಂಡಿದ್ದು, ಇಂದು 57 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ವಿಜಯಪುರದಲ್ಲಿ57 ಜನರಿಗೆ ಸೋಂಕು
ಇಲ್ಲಿಯವರೆಗೆ 61, 380 ಜನರ ಮೇಲೆ ನಿಗಾ ಇಡಲಾಗಿದೆ. 81,941 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 74,142 ಜನರ ವರದಿ ನೆಗೆಟಿವ್ ಇದೆ. 7507 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 292 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.