ವಿಜಯಪುರ: ಜಿಲ್ಲೆಯಲ್ಲಿ ಹೊಸದಾಗಿ 117 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇಂದು ಕೊರೊನಾದಿಂದ 62 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ವಿಜಯಪುರ: ಇಂದು 117 ಜನರಿಗೆ ಪಾಸಿಟಿವ್ ದೃಢ - ವಿಜಯಪುರದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ
ವಿಜಯಪುರ ಜಿಲ್ಲೆಯಲ್ಲಿ ಇಂದು 117 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿನ ಈವರೆಗಿನ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 9,278 ಆಗಿದೆ.
ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 8,474 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಸಾವಿನ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ಇಲ್ಲಿವರೆಗೆ ಜಿಲ್ಲೆಯಲ್ಲಿ 9,278 ಜನರಿಗೆ ಸೋಂಕು ತಗುಲಿದೆ. ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 642 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 99,865 ಜನರ ಮೇಲೆ ನಿಗಾ ಇಡಲಾಗಿದೆ. 1,01,997 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 91,764 ಜನರ ವರದಿ ನೆಗೆಟಿವ್ ಆಗಿದೆ. 9,278 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1042 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.