ವಿಜಯಪುರ: ಕೊರೊನಾ ಇಂದೂ ಸಹ ಶತಕ ಬಾರಿಸಿದ್ದು, ಜಿಲ್ಲೆಯಲ್ಲಿ ಇಂದು 139 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಒಟ್ಟು 3,973 ಜನರಲ್ಲಿ ಸೋಂಕು ದೃಢಪಟ್ಟಿದೆ.
ವಿಜಯಪುರ ಜಿಲ್ಲೆಯಲ್ಲಿ ಇಂದು 139 ಜನರಲ್ಲಿ ಕೊರೊನಾ ಸೋಂಕು ದೃಢ... - Corona virus infection in 139 people Vijayapura
ವಿಜಯಪುರ ಜಿಲ್ಲೆಯಲ್ಲಿ ಇಂದು 139 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಒಟ್ಟು 3,973 ಜನರಲ್ಲಿ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಇಂದು 101 ಜನ ಸೇರಿ ಇಲ್ಲಿಯವರೆಗೆ 2,902 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 1,029 ಜನ ಸೋಂಕಿಗೆ ಆಸ್ಪತ್ರೆಯಲ್ಲಿ, ಹೋಮ್ ಕ್ವಾರಂಟೈನ್, ಹೋಮ್ ಐಸೋಲೇಶನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಸೋಂಕಿನಿಂದ 42 ಜನ ಸಾವನ್ನಪ್ಪಿದ್ದಾರೆ.
ಇಲ್ಲಿಯವರೆಗೆ 42,613 ಜನರ ಮೇಲೆ ನಿಗಾ ಇಡಲಾಗಿದೆ. 54,934 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 50,122 ಜನರ ವರದಿ ನೆಗಟಿವ್ ವರದಿ ಬಂದಿದೆ. 3,973 ಜನರ ವರದಿ ಪಾಸಿಟಿವ್ ಬಂದಿದೆ. ಇನ್ನೂ 839 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.