ವಿಜಯಪುರ: ಇಂದು ಹೊಸದಾಗಿ 129 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 3 ಸಾವಿರ ಗಡಿ ದಾಟಿದೆ.
ವಿಜಯಪುರದಲ್ಲಿ 3 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ - Vijayapura Corona news
ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 3 ಸಾವಿರ ಗಡಿ ದಾಟಿದ್ದು, ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

ವಿಜಯಪುರದಲ್ಲಿ 3 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ಈವರೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,019 ಕ್ಕೆ ಏರಿಕೆಯಾಗಿದೆ. ಇಂದು 55 ಜನ ಸೇರಿ 2,116 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಕೊರೊನಾದಿಂದ ಓರ್ವ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಈಗ 868 ಜನ ಕೊರೊನಾ ಸೋಂಕಿತರಿಗೆ ವಿಜಯಪುರ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.