ವಿಜಯಪುರ: ಕಬ್ಬು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ಬಳಿಯ ಎನ್ ಹೆಚ್ 50 ರಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಭಯ್ಯಾಜಿ ಶಿಂಧೆ (50) ಹಾಗೂ ಅವರ ಪತ್ನಿ ಸುಮಿತ್ರಾ ಶಿಂಧೆ (45) ಮೃತ ದಂಪತಿ. ಘಟನೆಯಿಂದ ಇನ್ನೂ ಒಂಬತ್ತು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ಮಹಾರಾಷ್ಟ್ರದ ಸೊಲ್ಲಾಪುರ ಪಟ್ಟಣ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.