ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು, ಸಾವಿನ ಪ್ರಕರಣ ಸಹ ಏರಿಕೆ ಕಂಡಿದೆ. ಇಂದು 134 ಹೊಸ ಕೋವಿಡ್ ಪಾಸಿಟಿವ್ ದೃಢವಾಗಿದ್ದು, ನಿನ್ನೆ 155 ಜನ ಕೊರೊನಾ ಟೆಸ್ಟ್ ಮಾಡಲಾಗಿತ್ತು.
ವಿಜಯಪುರದಲ್ಲಿ ಇಂದು 134 ಜನರಿಗೆ ಕೋವಿಡ್ ದೃಢ - Vijayapura Corona updates
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 788 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 52,916 ಜನರ ಮೇಲೆ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ 5,668 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 155 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 4,803 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 77 ಕ್ಕೆ ಏರಿಕೆಯಾಗಿದೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 788 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 52,916 ಜನರ ಮೇಲೆ ನಿಗಾ ಇಡಲಾಗಿದೆ. 66,018 ಜನರ ಗಂಟಲು ದ್ರವ ಮಾದರಿ ಪಡೆಯಲಾಗಿದೆ. ಇವರಲ್ಲಿ 59,189 ಜನರ ವರದಿ ನೆಗಟಿವ್, 5,668 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1,155 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.