ಕರ್ನಾಟಕ

karnataka

ETV Bharat / state

ವಿಜಯಪುರ: ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನ, ಇಬ್ಬರು ಕಂದಮ್ಮಗಳು ಸಾವು - ಈಟಿವಿ ಭಾರತ ಕರ್ನಾಟಕ

ಕೌಟುಂಬಿಕ ಕಲಹ ಹಿನ್ನೆಲೆ ತಂದೆ ತನ್ನ ಮೂವರು ಮಕ್ಕಳಿಗೆ ವಿಷ ಹಾಕಿ ಆತ್ಮಹತ್ಯೆ ಯತ್ನಿಸಿದ ಘಟನೆ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಲ್ಲಿ ನಡೆದಿದೆ.

father-attempt-suicide-by-poisoning-childrens-in-vijayapura
ವಿಜಯಪುರ: ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನ, ಇಬ್ಬರು ಮಕ್ಕಳು ಸಾವು

By ETV Bharat Karnataka Team

Published : Sep 2, 2023, 8:48 PM IST

ವಿಜಯಪುರ:ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಲ್ಲಿ ಶನಿವಾರ ನಡೆದಿದೆ. ಮೂವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಒಂದು ಮಗು ಹಾಗೂ ತಂದೆ ಭೀರಣ್ಣ ಮಸಬಿನಾಳ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿದಿನ ಮನೆಯಲ್ಲಿ ಪತಿ-ಪತ್ನಿಯ ನಡುವೆ ಜಗಳವಾಗುತ್ತಿತ್ತು. ಇದರಿಂದ ಬೇಸತ್ತಿದ್ದ ಪತಿ ಭೀರಣ್ಣ ಶನಿವಾರ ಪತ್ನಿ ಮನೆಯಲ್ಲಿ ಇರದ ಕಾರಣ ಮಕ್ಕಳಿಗೆ ಹಾಲಿನಲ್ಲಿ ವಿಷ ಬೆರೆಸಿ ಕೊಟ್ಟು ತಾನು ವಿಷ ಸೇವಿಸಿದ್ದಾನೆ. ಮಕ್ಕಳ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಆಗಮಿಸಿ ತಕ್ಷಣ ಮನಗೂಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರು ಮಕ್ಕಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮೂವರು ಪುಟ್ಟ ಮಕ್ಕಳು, ತಂದೆ ಅನುಮಾನಾಸ್ಪದ ಸಾವು: ಘಟನೆಯ ನಂತರ ತಾಯಿ ಪರಾರಿ ಆರೋಪ

ABOUT THE AUTHOR

...view details