ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಿನಗೂಲಿ ನೌಕಕರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ರು. ಸರ್ಕಾರ ದಿನಗೂಲಿ ನೌಕರರಿಗೆ ಯಾವುದೇ ಸವಲತ್ತುಗಳನ್ನ ನೀಡಿಲ್ಲ. ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ದಿನಗೂಲಿ ನೌಕರರಿದ್ದಾರೆ. ಅವರಿಗೆ ಸರಿಯಾಗಿ ವೇತನ ನೀಡಿಲ್ಲ, ಸರ್ಕಾರದ ಯಾವುದೇ ಸೇವಾ ಸೌಲಭ್ಯಗಳು ಸಿಗುತಿಲ್ಲ.
ಹೀಗಾಗಿ ಕಷ್ಟದ ಜೀವನ ನಡೆಸುವ ಪರಿಸ್ಥಿತಿ ನಿರ್ಣಾಮವಾಗಿದೆ. ಅನೇಕ ಬಾರಿ ಪ್ರತಿಭಟನೆ ನಡೆಸಿದ್ರು ಸರ್ಕಾರ ಮಾತ್ರ ಕ್ರಮಕ್ಕೆ ಮುಂದಾಗದಿರುವುದು ವಿಪರ್ಯಾಸ ಎಂದು ಪ್ರತಿಭಟನಾನಿರತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಮಾರ್ಚ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ದಿನಗೂಲಿ ನೌಕರರಿಗೆ ಮೂಲಭೂತ ಸೌಕರ್ಯ, ವೇತನ, ಕಾಯಂ ನೌಕರಿ, ನೀಡಿದ ಸೇವಾವಧಿ ಹೆಚ್ಚಳ, ನೌಕರರಿಗೆ ಭದ್ರತೆ ಒದಗಿಸುವಂತೆ ಕೋರಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.