ವಿಜಯಪುರ:ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಇಂಡಿ ತಾಲೂಕಿನ ಮಾರ್ಸನಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆರೋಪ: ದಲಿತ ಸಂಘಟನೆಗಳಿಂದ ಪ್ರತಿಭಟನೆ - vijayapura protest
ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಇಂಡಿ ತಾಲೂಕಿನ ಮಾರ್ಸನಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ
ಗ್ರಾಮದಲ್ಲಿ ದಲಿತ ಸಂಘಟನೆಗಳಿಂದ ಸ್ಥಾಪಿಸಲಾಗಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅಪಮಾನವಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಗ್ರಾಮದಲ್ಲಿ ರಸ್ತೆ ಮೇಲೆ ವಾಹನದ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿದ್ದು, ಸೂಕ್ತ ತನಿಖೆ ನಡೆಸಿ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುತ್ತೇವೆ ಎಂದು ತಿಳಿಸಿದರು.