ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಪಾಕ್ ಏಜೆಂಟ್ ಎಂದು ನೀಡಿದ್ದಾರೆ ಎನ್ನಲಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ವಿರೋಧಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ದೊರೆಸ್ವಾಮಿಗೆ ಅಪಮಾನ... ಯತ್ನಾಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ - ವಿಜಯಪುರ ಪ್ರತಿಭಟನೆ ಸುದ್ದಿ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಪಾಕ್ ಏಜೆಂಟ್ ಎಂದು ನೀಡಿದ್ದಾರೆ ಎನ್ನಲಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.
ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶಾಸಕ ಯತ್ನಾಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ದಲಿತ ವಿದ್ಯಾರ್ಥಿ ಪರಿಷತ್ನ ಕಾರ್ಯಕರ್ತರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರಿಗೆ ಪಾಕ್ ಏಜೆಂಟ್ ಎಂದು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಸ್ವಾತಂತ್ರ್ಯ ಹೋರಾಟಗಾರನಿಗೆ ಅಪಮಾನ ಮಾಡಿದ ಶಾಸಕ ಯತ್ನಾಳ್ ಅವರ ವಿರುದ್ಧ ಕ್ರಮ ಜರುಗಿಸಬೇಕು. ಅಲ್ಲದೇ ಶಾಸಕ ಸ್ಥಾನ ರದ್ದುಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.