ವಿಜಯಪುರ:ಕೊರೊನಾ ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ಒದಗಿಸುವುದರ ಜೊತೆಗೆ ಸರ್ಕಾರದ ಮಾರ್ಗ ಸೂಚಿ ಅನ್ವಯ ಶುಲ್ಕ ಪಡೆಯುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ವೈದ್ಯರಿಗೆ ಸೂಚಿಸಿದ್ದಾರೆ.
ಕೋವಿಡ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಭೇಟಿ: ಪರಿಶೀಲನೆ - ಯಶೋಧಾ ಹಾಗೂ ಯಶೋಧರಾ ಆಸ್ಪತ್ರೆ
ನಗರದ ಯಶೋಧಾ ಹಾಗೂ ಯಶೋಧರಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ವೈದ್ಯರೊಂದಿಗೆ ಸಭೆ ಮತ್ತು ಕೊರೊನಾ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸಾ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು. ಸೋಂಕಿತರಿಗೆ ಅತ್ಯುತ್ತಮ ಮತ್ತು ತುರ್ತು ಚಿಕಿತ್ಸೆ ಒದಗಿಸುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಭೇಟಿ

ಕೊರೊನಾ ಸೋಂಕಿತರ ಮರಣ ಪ್ರಮಾಣ ತಗ್ಗಿಸಬೇಕು. ಹೆಚ್ಚಿನ ಬಿಲ್ ಮಾಡದೇ ಸರ್ಕಾರದ ಮಾರ್ಗ ಸೂಚಿಯನ್ವಯ ರೋಗಿಗಳಿಂದ ಶುಲ್ಕ ಪಡೆಯುವಂತೆ ಸೂಚಿಸಿದರು. ಆಸ್ಪತ್ರೆ ಚಿಕಿತ್ಸಾ ವ್ಯವಸ್ಥೆಯ ಬಗ್ಗೆ, ರೋಗಿಗಳಿಗೆ ಒದಗಿಸಿರುವ ಸೌಲಭ್ಯಗಳು ಸೇರಿದಂತೆ ಇನ್ನಿತರ ಕುಂದುಕೊರತೆಗಳ ಬಗ್ಗೆ ಆಲಿಸಿದರು.