ವಿಜಯಪುರ:ಜಿಲ್ಲೆಯಲ್ಲಿ ಯಾರಾದರು ನೆಗಡಿ, ಕೆಮ್ಮು, ಜ್ವರ ಮತ್ತು ತೀವ್ರ ಉಸಿರಾಟ ತೊಂದರೆಗಳಂತಹ ಲಕ್ಷಣಗಳಿಂದ ಬಳಲುತ್ತಿದ್ದಲ್ಲಿ ಸ್ವಯಂ ಪ್ರೇರಣೆಯಿಂದ ಹಾಗೂ ಇಂತಹ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣ ಸಹಾಯವಾಣಿ ಸಂಖ್ಯೆ 1077ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮನವಿ ಮಾಡಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ನೆಗಡಿ, ಕೆಮ್ಮು, ಜ್ವರ ಮತ್ತು ತೀವ್ರ ಉಸಿರಾಟ ತೊಂದರೆಗಳಿಂದ ಬಳಲುತ್ತಿರುವವರ ಗಂಟಲು ಸ್ವ್ಯಾಬ್ (ಗಂಟಲು ದ್ರವ ಮಾದರಿ) ಅನ್ನು ಮಹಾನಗರ ಪಾಲಿಪಪಕೆ ವ್ಯಾಪ್ತಿಯ ನಾಗರಿಕರಿಗೆ ಸಂಬಂಧಪಟ್ಟಂತೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಮತ್ತು ಆಯಾ ತಾಲೂಕುಗಳ ನಾಗರಿಕರಿಗೆ ಸಂಬಂಧಿಸಿ ದಂತೆ ಆಯಾ ತಾಲೂಕಾ ಆಸ್ಪತ್ರೆಗಳಲ್ಲಿ ಮತ್ತು ಎಲ್ಲ ಸಮುದಾಯ ಆರೋಗ್ಯ ಕೇಂದ್ರ (ಸಿಎಚ್ಸಿ) ಗಳಲ್ಲಿ ಉಚಿತವಾಗಿ ಗಂಟಲು ಸ್ವ್ಯಾಬ್ ಪಡೆಯುವುವ ವ್ಯವಸ್ಥೆ ಮಾಡಲಾಗಿದ್ದು, ಮೇಲ್ಕಂಡ ಲಕ್ಷಣವುಳ್ಳವರು ತಕ್ಷಣ ಇಲ್ಲಿ ಸಂಪರ್ಕಿಸಲು ಜಿಲ್ಲಾಧಿಕಾರಿಗಳು ಕೋರಿದ್ದಾರೆ.