ವಿಜಯಪುರ: ಕೊರೊನಾ ಭೀತಿಯಿಂದಾಗಿ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಹೋಗುವ ಎಲ್ಲಾ ಖಾಸಗಿ ಹಾಗೂ ಸಾರಿಗೆ ಸಂಸ್ಥೆ ಬಸ್ಗಳ ಸಂಚಾರವನ್ನು ಮಾರ್ಚ್ 31ರವರೆಗೆ ಸ್ಥಗಿತಗೊಳಿಸಿರುವುದಾಗಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದ್ದಾರೆ.
ಕೊರೊನಾ ಭೀತಿ: ವಿಜಯಪುರದಿಂದ ಮಹಾರಾಷ್ಟ್ರಕ್ಕೆ ಹೋಗುವ ಬಸ್ಗಳ ಸಂಚಾರ ಸ್ಥಗಿತ
ಕೊರೊನಾ ಭೀತಿಯಿಂದಾಗಿ ವಿಜಯಪುರದಿಂದ ಮಹಾರಾಷ್ಟ್ರಕ್ಕೆ ಇಂದಿನಿಂದ ಸಂಚರಿಸುವ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಡಿಸಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಸಭಾಭವನದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ಶಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು.
ನಿನ್ನೆಯಿಂದ ಇವತ್ತಿನವರೆಗೂ ವಿದೇಶದಲ್ಲಿದ್ದ 11 ಜನರು ಜಿಲ್ಲೆಗೆ ವಾಪಸಾಗಿದ್ದಾರೆ. ಅವರಿಗೆ ಹೋಮ್ ಕ್ವಾರಂಟೈನ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಗೆ ಮರಳಿದ ಒಟ್ಟು 266 ಜನರಲ್ಲಿ 11 ಜನರು ಹೋಮ್ ಕ್ವಾರಂಟೈನ್ ಹಾಗೂ ಅಬ್ಸರ್ವೇಶನ್ ಮುಗಿಸಿದ್ದು, 85 ಜನರು ರಿಪೋರ್ಟಿಂಗ್ ಪರೇಡ್ನಲ್ಲಿದ್ದಾರೆ. 165 ಜನರನ್ನ ಹೋಮ್ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದರು.