ಮುದ್ದೇಬಿಹಾಳ ರಾಜ್ಯದಲ್ಲಿರುವ ಮರಾಠರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲಾಗಿದೆಯೇ ಹೊರತು ಮರಾಠಿ ಅಭಿವೃದ್ಧಿ ನಿಗಮವಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಛತ್ರಪತಿ ಶಿವಾಜಿ ಕರ್ನಾಟಕದವರು, ಮರಾಠರು ನಮ್ಮ ಅಣ್ಣ-ತಮ್ಮಂದಿರು: ಡಿಸಿಎಂ ಕಾರಜೋಳ
ಛತ್ರಪತಿ ಶಿವಾಜಿ ಅವರು ಕರ್ನಾಟಕದವರು. ಅವರ ಮೂಲ ಪುರುಷರು ಕರ್ನಾಟಕ ಭಾಗದವರೇ ಆಗಿದ್ದಾರೆ. ಮರಾಠಾರು ನಮ್ಮ ಅಣ್ಣ-ತಮ್ಮಂದಿರು ಆಗಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಡಿಸಿಎಂ ಗೋವಿಂದ ಕಾರಜೋಳ ಸಮರ್ಥಿಸಿಕೊಂಡಿದ್ದಾರೆ.
ಪಟ್ಟಣದಲ್ಲಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ನಿವಾಸದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಅವರು ಕರ್ನಾಟಕದವರು. ಅವರ ಮೂಲ ಪುರುಷರು ಕರ್ನಾಟಕ ಭಾಗದವರೇ ಆಗಿದ್ದಾರೆ. ಮರಾಠರು ನಮ್ಮ ಅಣ್ಣ-ತಮ್ಮಂದಿರು ಆಗಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಇತಿಹಾಸ ಗೊತ್ತಿಲ್ಲದವರು ಏನೇನೋ ಹೇಳುತ್ತಾರೆ ಎಂದರೆ ಅದಕ್ಕೆ ಕಿವಿಗೊಡುವುದು ಬೇಡ ಎಂದರು.
ಕೇಂದ್ರ ಸರ್ಕಾರದಿಂದ 577 ಕೋಟಿ ರೂ.ಪರಿಹಾರ ಬಿಡುಗಡೆ: ಅತೀವೃಷ್ಟಿ, ಅನಾವೃಷ್ಟಿಯಿಂದ ಆದ ಹಾನಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಈ ವರ್ಷ 577 ಕೋಟಿ ರೂ. ಪರಿಹಾರ ಧನ ಬಿಡುಗಡೆ ಮಾಡಿದೆ ಎಂದು ಕಾರಜೋಳ ಹೇಳಿದರು. ಈ ವೇಳೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಮುಖಂಡರಾದ ಎಂ.ಎಸ್. ಪಾಟೀಲ, ಮಲಕೇಂದ್ರಗೌಡ ಪಾಟೀಲ, ಹೇಮರಡ್ಡಿ ಮೇಟಿ ಇತರರು ಇದ್ದರು.