ವಿಜಯಪುರ :ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ವಿಳಂಬಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ. ವಿಮಾನ ನಿಲ್ದಾಣ ಕಾಮಗಾರಿಯಲ್ಲಿಯೂ ರಾಜಕೀಯ ಬೆರೆತಿರುವುದೇ ವಿಳಂಬಕ್ಕೆ ಕಾರಣ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದರು.
ವಿಮಾನ ನಿಲ್ದಾಣ ಕಾಮಗಾರಿ ಸ್ಥಳ ಪರಿಶೀಲನೆ ವಿಜಯಪುರ ತಾಲೂಕಿನ ಬುರಣಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದ ಡಿಸಿಎಂ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಮಾನ ನಿಲ್ದಾಣ ಕಾಮಗಾರಿ ಸ್ಥಳ ಪರಿಶೀಲನೆ ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದಿದ್ದರೆ ವಿಮಾನ ನಿಲ್ದಾಣ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುತ್ತಿತ್ತು. ಅವರಿಗೆ ಬೀದರ್, ಗುಲಬುರ್ಗಾ ಮೇಲಿದ್ದ ಪ್ರೀತಿ ಶಿವಮೊಗ್ಗ, ವಿಜಯಪುರ ಮೇಲೆ ಇರಲಿಲ್ಲ. ಅದಕ್ಕಾಗಿ ಅವುಗಳ ಜತೆ ಆರಂಭವಾಗಿದ್ದ ವಿಮಾನ ನಿಲ್ದಾಣ ಕಾಮಗಾರಿ ಮೂಲೆಗುಂಪಾಗಿತ್ತು ಎಂದು ಕಾಂಗ್ರೆಸ್ ದ್ವಿಮುಖ ಗುಣಗಳನ್ನು ಟೀಕಿಸಿದರು.
ವಿಮಾನ ನಿಲ್ದಾಣ ಕಾಮಗಾರಿ ಸ್ಥಳ ಪರಿಶೀಲನೆ ಸಿಎಂ ಯಡಿಯೂರಪ್ಪ ಇದ್ದಾಗಲೇ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೇರವೇರಿಸಲಾಗಿತ್ತು. ಅಂದು ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವನಾಗಿದ್ದೆ. ಈಗ ನನ್ನ ಸುದೈವ ಮತ್ತೆ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ದೊರೆತಿದೆ. ಸ್ಥಳ ಪರಿಶೀಲನೆ ನಡೆಸಿದ್ದೇನೆ, ಸಿಎಂ ಬಿಎಸ್ವೈ ಆಗಮಿಸಿ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.