ವಿಜಯಪುರ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ಕೆಟ್ಟ ಆಡಳಿತದಿಂದ ಜನತೆ ರೋಸಿ ಹೋಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿಗೆ ಸೋಲಾಗಲಿದೆ. ಬರುವ ಚುನಾವಣೆಯಲ್ಲಿ ಬಂಗಾಳದಲ್ಲಿ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಜಿಲ್ಲೆಯ ಇಂಡಿ ತಾಲೂಕಿನ ರಾಜನಾಳ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಮತಾ ಬ್ಯಾನರ್ಜಿ ಆಡಳಿತಾವಧಿಯಲ್ಲಿ ಸ್ವಜನಪಕ್ಷಪಾತ, ಭ್ರಷ್ಟಾಚಾರ, ಶೂನ್ಯ ಅಭಿವೃದ್ಧಿ ನೀಡಿದ್ದು, ಅವರ ಆಡಳಿತದಿಂದ ಬಂಗಾಳದ ಜನತೆ ಆಕ್ರೋಶಗೊಂಡಿದ್ದಾರೆ ಎಂದರು.