ಕರ್ನಾಟಕ

karnataka

ETV Bharat / state

ಅಂಗನವಾಡಿ ಕಾರ್ಯಕರ್ತೆಯರನ್ನು ಕೊರೊನಾ ವಾರಿಯರ್ಸ್​ ಎಂದು ಪರಿಗಣಿಸಲು ಆಗ್ರಹ..

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸಲಾಗಿದೆ ಆದರೂ ಇಂದಿಗೂ ಹಣ ಮಾತ್ರ ಕೈಸೇರಿಲ್ಲ. ಇದರಿಂದ ಆಶಾ ಕಾರ್ಯಕರ್ತೆಯರು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷೆ ಅಸಮಾಧಾನ ಹೊರಹಾಕಿದ್ದಾರೆ..

Demand for Consider Asha activists as covid Warriors: Neelamma Patil
ಅಂಗನವಾಡಿ ಕಾರ್ಯಕರ್ತೆಯರನ್ನು ಕೊರೊನಾ ವಾರಿಯರ್ಸ್​ ಎಂದು ಪರಿಗಣಿಸಲು ಆಗ್ರಹ..

By

Published : Jun 26, 2020, 10:05 PM IST

Updated : Jun 27, 2020, 1:56 AM IST

ಮುದ್ದೇಬಿಹಾಳ (ವಿಜಯಪುರ) :ಕೊರೊನಾ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ದುಡಿಸಿಕೊಂಡು ಯಾವುದೇ ವಿಶೇಷ ಅನುದಾನ ನೀಡದೇ ಇರುವುದರಿಂದ ತುತ್ತು ಕೂಳಿಗೂ ಕಾರ್ಯಕರ್ತೆಯರು ಪರದಾಟ ಅನುಭವಿಸುವಂತಾಗಿದೆ ಎಂದು ಅಂಗನವಾಡಿ ನೌಕರರ ಸಂಘಟನೆಯ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್‌ ಹೇಳಿದರು.

ತಾಳಿಕೋಟಿ ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ಕಾರ್ಯಕರ್ತೆಯರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತೆಯರಿಗೆ ಕಳೆದ ಮೂರು ತಿಂಗಳಿನಿಂದ ಬರಬೇಕಾದ ಬಾಕಿ ವೇತನ ನೀಡುವುದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೆಚ್ಚಿಸಿರುವ ವೇತನ ಕಾರ್ಯಕರ್ತೆಯರ ಖಾತೆಗೆ ಜಮಾ ಮಾಡುವುದು, ಮೊಟ್ಟೆಯ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರನ್ನು ಕೊರೊನಾ ವಾರಿಯರ್ಸ್​ ಎಂದು ಪರಿಗಣಿಸಲು ಆಗ್ರಹ..

ಮುಂಬರುವ ದಿನಗಳಲ್ಲಿ ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕರ್ತೆಯರ ವೇತನ ಹೆಚ್ಚಿಸಿದ್ದಾರೆ. ಆದರೆ, ಇಲ್ಲಿಯವರೆಗೂ ಹಣ ಕೈಸೇರಿಲ್ಲ. ಅಂಗನವಾಡಿ ಕಾರ್ಯಕರ್ತೆಯರನ್ನು ಕೋವಿಡ್-19 ವಾರಿಯರ್ಸ್ ಎಂದು ಪರಿಗಣಿಸಬೇಕು. ವಿವಿಧ ಕೆಲಸಗಳನ್ನು ಮಾಡಿಸಿಕೊಂಡಿದ್ದರೂ ಯಾವುದೇ ಅನುದಾನ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅಲ್ಲದೇ ನೌಕರರ ಮೇಲೆ ಶೋಷಣೆ ಹೆಚ್ಚುತ್ತಿದ್ದು ರಕ್ಷಣೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.

Last Updated : Jun 27, 2020, 1:56 AM IST

ABOUT THE AUTHOR

...view details