ವಿಜಯಪುರ :ನಗರದ ಗೋದಾವರಿ ಹೋಟೆಲ್ ಬಳಿಯ ಶಾಸ್ತ್ರೀನಗರದಲ್ಲಿ ಅಕ್ರಮವಾಗಿ ನಿರ್ಮಿಸಲ್ಪಟ್ಟ ಕಟ್ಟಡಗಳನ್ನು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ನೇತೃತ್ವದಲ್ಲಿ ಪೊಲೀಸ್ ಭದ್ರತೆಯೊಂದಿಗೆ ನೆಲಸಮಗೊಳಿಸಲಾಯಿತು. ನಿರ್ಮಾಣ ಹಂತದ ಮೂರು ಅಂತಸ್ತಿನ ಒಂದು ಕಟ್ಟಡ ಸೇರಿ ಒಟ್ಟು 29 ಮನೆಗಳನ್ನು ನೆಲಸಮಗೊಳಿಸಲಾಯಿತು.
ವಿಜಯಪುರದ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳ ನೆಲಸಮ - ಶಾಸ್ತ್ರಿನಗರದಲ್ಲಿ ಅಕ್ರಮ ಕಟ್ಟಡಗಳ ನೆಲಸಮ
ಬೆಳಗ್ಗೆಯಿಂದಲೇ ಮೂರು ಜೆಸಿಬಿಗಳ ಸಹಾಯದಿಂದ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರನ್ನು ಸ್ಥಳೀಯರು ಘೇರಾವ್ ಹಾಕಿ ಮನೆಗಳ ನೆಲಸಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರದ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳ ನೆಲಸಮ
ಬೆಳಗ್ಗೆಯಿಂದಲೇ ಮೂರು ಜೆಸಿಬಿ ಯಂತ್ರಗಳ ಸಹಾಯದಿಂದ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಈ ವೇಳೆ, ಸ್ಥಳದಲ್ಲಿದ್ದ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರನ್ನು ಸ್ಥಳೀಯರು ಘೇರಾವ್ ಹಾಕಿ ಮನೆಗಳ ನೆಲಸಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.
TAGGED:
vijaypur muncipality area