ವಿಜಯಪುರ: ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ಸ್ನೇಹಿತನನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅವಾಚ್ಯವಾಗಿ ನಿಂದಿಸಿದ್ದಕ್ಕೇ ಸ್ನೇಹಿತನನ್ನು ಕೊಂದಿದ್ದ ಆರೋಪಿ ಬಂಧನ - Vijayapur Police
ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂಬ ಕಾರಣಕ್ಕೆ ಸ್ನೇಹಿತನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
ಕೊಲೆ ಆರೋಪಿ ಬಂಧನ
ನಿಡಗುಂದಿಯ ಮೆಹಬೂಬ್ ಮೌಲಸಾಬ್ ನದಾಫ್ ಬಂಧಿತ ವ್ಯಕ್ತಿಯಾಗಿದ್ದಾರೆ. ನವೆಂಬರ್ 16ರಂದು ತಿಪ್ಪಣ್ಣ ಗೊಂಧಳಿ ಎಂಬಾತ ಆರೋಪಿಯೊಂದಿಗೆ ಬಾರ್ಗೆ ಹೋದಾಗ ಕುಡಿಯಲು ಹಣ ಕೊಡಲಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಮೆಹಬೂಬ್ ಸಾಬ್, ತಿಪ್ಪಣ್ಣನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ. ಈಗ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಎಸ್ಪಿ ಅನುಪಮ್ ಅಗರವಾಲ್ ಬಹುಮಾನ ಘೋಷಿಸಿದ್ದಾರೆ.