ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಲ್ಲಿಯವರೆಗೆ 7,570 ಪ್ರಕರಣಗಳು ದೃಢಪಟ್ಟಿದ್ದು. 130 ಸಾವು ಸಂಭವಿಸಿವೆ. ಜಿಲ್ಲಾಡಳಿತದಿಂದ ರೋಗದ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿರುವುದರಿಂದ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಮೃತರ ಪ್ರಕರಣಗಳನ್ನು ವಿಶ್ಲೇಷಿಸಿದಾಗ, ಹೆಚ್ಚು ಸಾವಿನ ಪ್ರಕರಣಗಳಲ್ಲಿ ಸೋಂಕಿತರು ರೋಗವು ತುಂಬಾ ಉಲ್ಬಣಗೊಂಡ ನಂತರ ಆಸ್ಪತ್ರೆಗಳಿಗೆ ದಾಖಲಾಗಿರುವುದು ಕಂಡು ಬಂದಿದೆ. ಕೋವಿಡ್-19 ರೋಗಕ್ಕೆ ಗುರುತಿಸಿರುವ ಆಸ್ಪತ್ರೆಗಳಿಗೆ ದಾಖಲಾಗದೇ, ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ ಎಂದರು.