ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಪಿ. ಹೆಚ್. ಗ್ರಾಮದಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಮತ್ತು ಎಸ್ಪಿ ಅನುಪಮ ಅಗರವಾಲ್ ಬೂದಿಹಾಳ ಪಿ.ಹೆಚ್ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದರು.
ದಲಿತ ಯುವಕನ ಕುಟುಂಬಸ್ಥರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯಿಂದ ಈಗಾಗಲೇ ಕುಟುಂಬಕ್ಕೆ 4,12,500 ರೂ.ಗಳನ್ನು ಮಂಜೂರು ಮಾಡಲಾಗಿದ್ದು, ಇದರ ಜೊತೆಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ನೊಂದ ಕುಟುಂಬಕ್ಕೆ ಮಂಜೂರಿಸಲಾಗುವುದು ಮತ್ತು ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರಿ ನೌಕರಿ ನೀಡಲಾಗುವುದು ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಭೂಮಿ ಸಹ ನೀಡಲಾಗುವುದು ಎಂದರು.