ವಿಜಯಪುರ: ಜಿಲ್ಲಾ ಆರೋಗ್ಯಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಅಧಿಕಾರಿ ಮನೋಹರ್ ಪಾಟೀಲ್ ₹30 ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.
ದಂತ ಸಹಾಯಕ ಹುದ್ದೆಗೆ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಅಧಿಕಾರಿ - District Program Managing Officer
ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚಕ್ಕೆ ಬೇಡಿಕೆಯಿಟ್ಟದ್ದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಅಧಿಕಾರಿ ಮನೋಹರ್ ಲಂಚ ಪಡೆಯುವಾಗ ಎಸಿಬಿ ದಾಳಿ ನಡೆಸಿದೆ.
ಎಸಿಬಿ ಬಲೆಗೆ ಬಿದ್ದ ಅಧಿಕಾರಿ
ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮನೋಹರ್, ಸಂತೋಷ ಚಲವಾದಿ ಎಂಬವರಿಂದ ಹಣ ಪಡೆಯುವಾಗ ಎಸಿಬಿ ದಾಳಿ ನಡೆಸಿದೆ. ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು, ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.