ವಿಜಯಪುರ:ಸಚಿವ ಸಂಪುಟದಲ್ಲಿ ಅವಕಾಶ ಸಿಗದಿದ್ದರಿಂದ ಮುನಿಸಿಕೊಂಡು ಕೇಂದ್ರ ಮತ್ತು ರಾಜ್ಯ ನಾಯಕರ ವಿರುದ್ಧ ತಿರುಗಿಬಿದ್ದಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈಗ ತಣ್ಣಗಾಗಿದ್ದಾರೆ. ಅಲ್ಲದೆ, ತಮ್ಮ ವರಸೆಯನ್ನೂ ಬದಲಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ನಾಯಕರ ವಿರುದ್ಧ ತುಟಿ ಬಿಚ್ಚಲಿಲ್ಲ. ಸಚಿವ ಸಂಪುಟ ವಿಸ್ತರಣೆ ಕುರಿತು ಏನೂ ಮಾತಾಡುವುದಿಲ್ಲ. ಹೈಕಮಾಂಡ್ ಮತ್ತು ಸಿಎಂ ಅವರು ಸಮರ್ಥರಿದ್ದಾರೆ ಎನ್ನುವ ಮೂಲಕ ಮೌನಕ್ಕೆ ಶರಣಾಗಿದ್ದಾರೆ.
ಹೈಕಮಾಂಡ್ ಬಹಳ ಸ್ಟ್ರಾಂಗ್ ಇದೆ. ಡಿಸಿಎಂ ಹುದ್ದೆ ಬಗ್ಗೆ ಉಮೇಶ ಕತ್ತಿ, ರೇಣುಕಾಚಾರ್ಯ ಅಸಮಾಧಾನವನ್ನು ಮುಖ್ಯಮಂತ್ರಿ ಬಗೆಹರಿಸುತ್ತಾರೆ. ನಾನು ಯಾವುದೇ ಹುದ್ದೆಗೆ ಲಾಬಿ ಮಾಡುವುದಿಲ್ಲ. ಇತ್ತೀಚಿಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಯತ್ನಾಳ ವಿರುದ್ಧ ಕಿಡಿಕಾರಿದ್ದರು. ಅದಕ್ಕೆ ಉತ್ತರಿಸಿದ ಅವರು, ಈಶ್ವರಪ್ಪ ಸಲಹೆ ನೀಡಿದ್ದಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದರು.
ರಾಜ್ಯದಲ್ಲಿ ವಿಸ್ತರಣೆಯಾದ ಸಚಿವ ಸಂಪುಟದಲ್ಲಿ ತಮಗೆ ಅವಕಾಶ ನೀಡಲಿಲ್ಲ ಎಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಯತ್ನಾಳ ಅವರು ಕೇಂದ್ರ ಮತ್ತು ರಾಜ್ಯ ನಾಯಕರ ವಿರುದ್ಧ ಗುಡುಗಿದ್ದರು.