ವಿಜಯಪುರ:ಜಿಲ್ಲೆಯಲ್ಲಿ ಇಂದು ಮತ್ತೆ ಭೂಕಂಪನವಾಗಿದೆ. ತಿಕೋಟಾ ಪಟ್ಟಣ ಹಾಗೂ ಸುತ್ತಮುತ್ತಲ ಪ್ರದೇಶದ ಜನರಿಗೆ ಭುವಿಯೊಡಲು ನಡುಗಿದ ಅನುಭವವಾಗಿದೆ. ನಸುಕಿನ ಜಾವ 3 ಗಂಟೆಯಿಂದ 5 ಗಂಟೆಯವರೆಗೆ ಕಂಪನ ಉಂಟಾಗಿದ್ದು, ಆತಂಕಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಸರಣಿ ರೂಪದಲ್ಲಿ ಜಿಲ್ಲೆಯ ವಿವಿಧೆಡೆ ಇಂಥ ಘಟನೆಗಳು ಮರುಕಳಿಸುತ್ತಿವೆ.
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ - Earthquake experience
ಭೂಮಿ ಕಂಪಿಸಿರುವ ಬಗ್ಗೆ ಹಾಗೂ ಭೂಕಂಪನದ ತೀವ್ರತೆ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ.
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದ ಅನುಭವ