ವಿಜಯಪುರ :ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ನಡುವೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಭೂಕಂಪನದ ಅನುಭವವಾಗಿದೆ. ಇಂದು ಸಂಜೆ 5 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನ ಮನೆಯಿಂದ ಓಡಿ ಹೊರ ಬಂದಿದ್ದಾರೆ.
ಭಾರಿ ಮಳೆ ನಡುವೆ ಉಕ್ಕಲಿಯಲ್ಲಿ ಭೂಮಿ ಕಂಪಿಸಿದ ಅನುಭವ! - Earthquake latest news
ಭಾರಿ ಪ್ರಮಾಣದಲ್ಲಿ ಮಳೆ ಸುರಿದ ನಂತರ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಕೂಡ ಭೂಮಿ ಕಂಪಿಸಿದ ಅನುಭವ ಆಗಿತ್ತು..
ಸಾಂದರ್ಭಿಕ ಚಿತ್ರ
ಭಾರಿ ಪ್ರಮಾಣದಲ್ಲಿ ಮಳೆ ಸುರಿದ ನಂತರ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಕೂಡ ಭೂಮಿ ಕಂಪಿಸಿದ ಅನುಭವ ಆಗಿತ್ತು.
ಈಗ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ಕಳೆದ ತಿಂಗಳು ಸಹ ಬಸವನಬಾಗೇವಾಡಿ ತಾಲೂಕಿನ ವಿವಿಧೆಡೆ ಲಘು ಭೂಕಂಪನದ ಆತಂಕ ಕಾಡಿತ್ತು.
Last Updated : Jun 5, 2021, 7:26 PM IST