ಕರ್ನಾಟಕ

karnataka

ETV Bharat / state

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ - ವಿಜಯಪುರ ಭೂಕಂಪನ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನವಾಗಿದೆ. ಗುರುವಾರ ಸಂಜೆ 6.21ರ ಸುಮಾರಿಗೆ ಭೂಮಿ ಕಂಪಿಸಿದೆ.

Earthquake of magnitude 3.2 on the Richter scale occurred at Vijayapura
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ

By

Published : Oct 15, 2021, 1:54 AM IST

ವಿಜಯಪುರ:ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನವಾಗಿದೆ. ಒಂದು ತಿಂಗಳಲ್ಲಿ 7ನೇ ಬಾರಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ್ದು, ಜನರು ಮತ್ತೆ ಆತಂಕಗೊಂಡಿದ್ದಾರೆ.

ಬಸವನಬಾಗೇವಾಡಿಯ ಮಗೂಳಿಯಲ್ಲಿ ಗುರುವಾರ ಸಂಜೆ 6.21ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಕಂಪನ ದಾಖಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್‌) ದೃಢಪಡಿಸಿದೆ.

ಜಿಲ್ಲೆಯಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿರುವುದರಿಂದ ಜನರು ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಭೂಕಂಪನ ತಜ್ಞರು ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ.

ಸೆಪ್ಟೆಂಬರ್ 4ರ ಬಳಿಕ ಜಿಲ್ಲೆಯಲ್ಲಿ ಒಟ್ಟು 7 ಬಾರಿ ಭೂಕಂಪನದ ಅನುಭವವಾಗಿದೆ. ಕಂಪನದಿಂದ ಇದುವರೆಗೂ ಯಾರಿಗೂ ತೊಂದರೆಯಾಗಿಲ್ಲ. ಮನೆಯ ಕಿಟಕಿ ಗಾಜು ಒಡೆದಿದ್ದು, ಪಾತ್ರೆಗಳು ನೆಲಕ್ಕುರುಳಿವೆ.

ABOUT THE AUTHOR

...view details