ವಿಜಯಪುರ: ಉಪಚುನಾವಣೆ ಬಳಿಕ ಆಪರೇಷನ್ ಕಮಲ ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪ, ಸದ್ಯ ನಡೆಯಲಿರುವ ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ಬಹುಮತ ಪಡೆಯುತ್ತೇವೆ. ಇನ್ನು ಕಾಂಗ್ರೆಸ್-ಜೆಡಿಎಸ್ ನವರು ತಾವಾಗಿಯೇ ಪಕ್ಷ ತೊರೆದು ಬಿಜೆಪಿಗೆ ಬಂದರೆ ನಾವೇನೂ ಮಾಡಕ್ಕಾಗಲ್ಲ. ಅವರು ತಾವಾಗಿಯೇ ಬಿಜೆಪಿಗೆ ಬಂದ್ರೆ ಸ್ವಾಗತಿಸುತ್ತೇವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಸಾಕಷ್ಟು ಜನ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.