ಮುದ್ದೇಬಿಹಾಳ:ತಾಲೂಕಿನಲ್ಲಿ ನೀರಾವರಿ ಕಾಲುವೆಗಳ ಅಕ್ಕಪಕ್ಕದಲ್ಲಿ ಕೆಲವಷ್ಟು ಜಮೀನುಗಳು ಸವಳು ಜವಳು ಆಗಿದ್ದು ಅಲ್ಲಿ ಮೀನುಗಾರಿಕೆ ನಡೆಸಲು ಸಾಧ್ಯವಿದೆ. ಈ ದೆಸೆಯಲ್ಲಿ ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.
ತಾಲೂಕಿನ ಕೋಳೂರ ತಾಂಡಾದಲ್ಲಿ ಹಮ್ಮಿಕೊಂಡಿದ್ದ ನವರಾತ್ರಿ ಉತ್ಸವದ ನಿಮಿತ್ತ ಆಯೋಜಿಸಿದ್ದ ಧಾರ್ಮಿಕ ಪೂಜಾ ಹಾಗೂ ರಸಮಂಜರಿ ಸಮಾರಂಭದಲ್ಲಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮಾತನಾಡಿ, ಮತ್ಸ್ಯಸಂಪದ ಯೋಜನೆಯಡಿ ಎಕರೆಗೆ 4 ಲಕ್ಷ ರೂ.ಆದಾಯ ಗಳಿಸುವ ಅವಕಾಶ ಇದೆ ಎಂದು ಮೀನುಗಾರಿಕಾ ಕ್ಷೇತ್ರದಲ್ಲಿರುವ ತಜ್ಞರೇ ಹೇಳುತ್ತಿದ್ದು ಈ ಯೋಜನೆಯ ಬಗ್ಗೆ ಗ್ರಾಮೀಣ ಭಾಗದ ಯುವಕರಿಗೆ ಮಾಹಿತಿ ಇಲ್ಲ. ಇದರ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಲಾಗುವುದು ಎಂದರು.