ಕರ್ನಾಟಕ

karnataka

ETV Bharat / state

ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ... ಕಾರಣ ಕೇಳಿ ಜಿಲ್ಲಾಧಿಕಾರಿ ನೋಟಿಸ್ - ನೊಟೀಸ್ ಜಾರಿ

ಅಬಕಾರಿ ಹಾಗೂ ಆರ್‌ಟಿಓ ಅಧಿಕಾರಿಗಳ ಮಧ್ಯೆ ನಡೆದಿದ್ದ ಮಾತಿನ ಚಕಮಕಿ ಬಗ್ಗೆ ಇಬ್ಬರೂ ಅಧಿಕಾರಿಗಳಿಗೆ ಕಾರಣ ಕೇಳಿ ವಿಜಯಪುರ ಜಿಲ್ಲಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ.

ಅಬಕಾರಿ-ಆರ್‌ಟಿಓ ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ

By

Published : Sep 14, 2019, 2:57 AM IST

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಅಣಚಿ ಕ್ರಾಸ್ ಬಳಿ ಅಬಕಾರಿ ಹಾಗೂ ಆರ್‌ಟಿಓ ಅಧಿಕಾರಿಗಳ ನಡುವೆ ನಡೆದಿದ್ದ ಮಾತಿನ ಚಕಮಕಿ ಕುರಿತಂತೆ ಇಬ್ಬರೂ ಅಧಿಕಾರಿಗಳಿಗೆ ಕಾರಣ ಕೇಳಿ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ನೋಟಿಸ್ ಜಾರಿ ಮಾಡಿದ್ದಾರೆ.

ಅಬಕಾರಿ-ಆರ್‌ಟಿಓ ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ವಿಡಿಯೋ ವೈರಲ್

ಅಬಕಾರಿ ಸಬ್‌ ಇನ್ಸ್‌ಪೆಕ್ಟರ್ ಸದಾಶಿವ ಕೊರ್ತಿ ಹಾಗೂ ಆರ್‌ಟಿಓ ಇನ್ಸ್‌ಪೆಕ್ಟರ್ ನಾಗರಾಜ ಶೆಳ್ಳಗಿ ಅವರಿಗೆ ನೋಟಿಸ್​​ ಜಾರಿ ಮಾಡಲಾಗಿದೆ. 5 ದಿನಗಳೊಳಗೆ ಉತ್ತರ ನೀಡುವಂತೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಆದೇಶಿಸಿದ್ದಾರೆ.

ಮೂರ್ನಾಲ್ಕು ದಿನಗಳ ಹಿಂದೆ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಆರ್‌ಟಿಓ ಚೆಕ್‌ಪೋಸ್ಟ್‌ಗೆ ನುಗ್ಗಿ ಸ್ಪಿರಿಟ್ ಲಾರಿ ತಡೆದಿದ್ದರ ಬಗ್ಗೆ ಆರ್‌ ಟಿ ಓ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ಉಂಟಾಗಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿಡಿಸಿ ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ.

ABOUT THE AUTHOR

...view details