ವಿಜಯಪುರ: ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಾಕಿ ಹಣ ಬಿಡುಗಡೆ ಹಾಗೂ ಕೋವಿಡ್-19ನಿಂದ ಮೃತಪಟ್ಟ ನ್ಯಾಯಬೆಲೆ ಅಂಗಡಿಯವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಕಾರರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಾಕಿ ಹಣ ನೀಡುವಂತೆ ಆಗ್ರಹಿಸಿ ನ್ಯಾಯಬೆಲೆ ಅಂಗಡಿಕಾರರ ಸಂಘದಿಂದ ಪ್ರತಿಭಟನೆ
ಜಿಲ್ಲಾಧಿಕಾರಿಗಳು ನ್ಯಾಯಬೆಲೆ ಅಂಗಡಿಗೆ ಕಮಿಷನ್ ನೀಡುವ ಕುರಿತು ಕ್ರಮಕ್ಕೆ ಮುಂದಾಗಬೇಕು. ಕೊರೊನಾದಿಂದ ಮೃತಪಟ್ಟ ನ್ಯಾಯಬೆಲೆ ಅಂಗಡಿಯವರಿಗೆ ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಪರಿಹಾರ ನೀಡುವಂತೆ ಒತ್ತಾಯಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಕಳೆದ ಕೆಲವು ತಿಂಗಳಿಂದ ಅಂಗಡಿಕಾರರಿಗೆ ಸರ್ಕಾರ ಕಮಿಷನ್ ಬಿಡುಗಡೆ ಮಾಡಿಲ್ಲ. ನ್ಯಾಯಬೆಲೆ ಅಂಗಡಿಕಾರರಿಗೆ ಮಳಿಗೆ ಬಾಡಿಗೆ, ವಿದ್ಯುತ್ ಬಿಲ್ ಸೇರಿದಂತೆ ಇತರ ಖರ್ಚು ನಿಭಾಯಿಸಲು ಕಷ್ಟವಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಅಂಗಡಿಕಾರರು ಹಲವು ಬಾರಿ ಮನವಿ ಮಾಡಿದರೂ ನ್ಯಾಯಬೆಲೆ ಅಂಗಡಿಕಾರರ ನೆರವಿಗೆ ಅಧಿಕಾರಿಗಳು ಬರುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಇನ್ನು ಜಿಲ್ಲಾಧಿಕಾರಿಗಳು ನ್ಯಾಯಬೆಲೆ ಅಂಗಡಿಗೆ ಕಮಿಷನ್ ನೀಡುವ ಕುರಿತು ಕ್ರಮಕ್ಕೆ ಮುಂದಾಗಬೇಕು. ಕೊರೊನಾ ವೈರಸ್‌ನಿಂದ ಮೃತಪಟ್ಟ ನ್ಯಾಯಬೆಲೆ ಅಂಗಡಿಕಾರರಿಗೆ ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಪರಿಹಾರ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.