ವಿಜಯಪುರ: ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಡವಳಾರ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ - ವಿಜಯಪುರ ಆತ್ಮಹತ್ಯೆ ಸುದ್ದಿ
ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಡವಳಾರ ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದ ರೈತ
ಜಮೀನಿನಲ್ಲಿನ ಮರಕ್ಕೆ ನೇಣು ಹಾಕಿಕೊಂಡು ರೈತ ಚಂದ್ರಶೇಖರ ಹೊಸಮನಿ ( 38 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಸಿಐಸಿಐ ಬ್ಯಾಂಕ್ ಹಾಗೂ ಖಾಸಗಿಯಾಗಿ ಸಾಲ ಮಾಡಿದ್ದ ರೈತ, ಕಳೆದ 2019ರ ನವೆಂಬರ್ನಲ್ಲಿ ಚಂದ್ರಶೇಖರ್ಗೆ ಸಾಲ ಮರುಪಾವತಿಗೆ ಬ್ಯಾಂಕ್ ನೋಟಿಸ್ ನೀಡಿತ್ತು. ಇದರಿಂದ ನೊಂದಿದ್ದ ರೈತ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇನ್ನು ಸಂಬಂಧ ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.