ವಿಜಯಪುರ:ಬೆಳೆಹಾನಿಯಿಂದ ನೊಂದು ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿ: ನೊಂದ ರೈತ ಆತ್ಮಹತ್ಯೆ - vijaypur rain news
ಅತಿವೃಷ್ಟಿಗೆ ಉಂಟಾದ ಬೆಳೆಹಾನಿಯಿಂದ ನೊಂದು ಯುವ ರೈತನೊಬ್ಬ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.
ರೈತ ಆತ್ಮಹತ್ಯೆ
ಭೀಮಾಶಂಕರ ಇಂದ್ರಜಿತ ಮಾಶಾಳ (32) ಆತ್ಮಹತ್ಯೆ ಮಾಡಿಕೊಂಡ ರೈತ. ಮನೆಯ ಮಹಡಿಯ ಕೋಣೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ರೈತ ಹೊಲದಲ್ಲಿ ಹತ್ತಿ, ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಮಳೆ ಹೆಚ್ಚಾಗಿ ಬೆಳೆ ಹಾಳಾದ ಹಿನ್ನೆಲೆ ತೀವ್ರ ಬೇಸರಗೊಂಡಿದ್ದರು. ಇನ್ನು ಇವರು ಬ್ಯಾಂಕ್ ಮತ್ತು ಖಾಸಗಿಯಾಗಿ ಸಾಲ ಮಾಡಿದ್ದರು ಎನ್ನಲಾಗಿದೆ. ಆತ್ಮಹತ್ಯೆ ಕುರಿತಂತೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.