ವಿಜಯಪುರ:ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದಲ್ಲಿ ಸಾಲಭಾದೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಜಯಪುರ: ಸಾಲಭಾದೆ ತಾಳದೆ ಆತ್ಮಹತ್ಯೆಗೆ ಶರಣಾದ ರೈತ - Siddalinga Rupaghi suicide
ಸಿಂದಗಿ ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ ವಿವಿಧೆಡೆ ಲಕ್ಷಾಂತರ ರೂ. ಸಾಲ ಮಾಡಿದ್ದ ಎನ್ನಲಾಗಿದ್ದು, ಅತಿಯಾದ ಮಳೆಯಿಂದ ಬೆಳೆ ನಾಶವಾದ ಮೇಲೆ ಮನ ನೊಂದುಕೊಂಡಿದ್ದ ರೈತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಸಾಲಭಾದೆ ತಾಳದೆ ಆತ್ಮಹತ್ಯೆಗೆ ಶರಣಾದ ರೈತ
ಸಿದ್ದಲಿಂಗಪ್ಪ ರೂಡಗಿ ಆತ್ಮಹತ್ಯೆಗೆ ಶರಣಾದ ರೈತ. ತನ್ನ ಜಮೀನಿನಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದಾನೆ ಎನ್ನಲಾಗಿದೆ.
ಸಿಂದಗಿ ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ ವಿವಿಧೆಡೆ ಲಕ್ಷಾಂತರ ರೂ. ಸಾಲ ಮಾಡಿದ್ದ ಎನ್ನಲಾಗಿದ್ದು, ಅತಿಯಾದ ಮಳೆಯಿಂದ ಬೆಳೆ ನಾಶವಾದ ಮೇಲೆ ಮನ ನೊಂದುಕೊಂಡಿದ್ದ ರೈತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.