ವಿಜಯಪುರ : ಸಾಲಬಾಧೆ ತಾಳದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ರೈತ ಆತ್ಮ ಹತ್ಯೆ - former suicide in Vijayapur
ಸಾಲಬಾಧೆ ತಾಳದೇ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.
ಲೇಸಪ್ಪ ಡಾಂಗಿ
ಲೇಸಪ್ಪ ಡಾಂಗಿ (65) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಜಮೀನಿನಲ್ಲಿ ಬೆಳೆದ ಬೆಳೆ ಮಳೆ ಇಲ್ಲದ ಕಾರಣ ಕೈಕೊಟ್ಟಿದ್ದರಿಂದ ಮನನೊಂದು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲೇಸಪ್ಪ ಕೋರವಾರದ ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಒಂದೂವರೆ ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಅಲ್ಲದೇ ಸಾಕಷ್ಟು ಕೈಸಾಲ ಮಾಡಿಕೊಂಡಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.