ವಿಜಯಪುರ:ಸಾಲಬಾಧೆ ತಾಳದೆ ರೈತ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದ ಗ್ರಾಮದ ತೋಟದಲ್ಲಿ ನಡೆದಿದೆ.
ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ - Farmer suicide news
ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಬಬಲಾದ ಗ್ರಾಮದ ತೋಟದಲ್ಲಿ ನಡೆದಿದೆ.

ರೈತ ಆತ್ಮಹತ್ಯೆ
ಗ್ರಾಮದ ಬಾಬುರಾವ ಹಂಚನಾಳ(48) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ. ಡಿಸಿಸಿ ಹಾಗೂ ಪಿಎಲ್ಡಿಇ ಬ್ಯಾಂಕ್ಗಳಲ್ಲಿ 8 ಲಕ್ಷ ಮತ್ತು 5 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಸರಿಯಾಗಿ ಬೆಳೆ ಇಲ್ಲದ ಹಿನ್ನೆಲೆ ಎಂಟು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕೈಕೊಟ್ಟಿತ್ತು. ಇದರಿಂದ ಸಾಲದ ಸುಳಿಗೆ ಸಿಲುಕಿದ ರೈತ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.