ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಮಲಘಾಣ ಪಶ್ಚಿಮ ಕಾಲುವೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಕೃಷ್ಣ ಭಾಗ್ಯ ಜಲ ನಿಗಮ ಮಂಡಳಿ ಮುಖ್ಯ ಅಭಿಯಂತರರಿಗೆ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಬಬಲೇಶ್ವರ ತಾಲೂಕಿನ ಅರ್ಜುಣಗಿ, ಹೆಬ್ಬಾಳಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ ಇಲ್ಲದೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಕೆರೆಗಳು ಸಹ ಬತ್ತಿ ಹೋಗಿವೆ. ಇದರಿಂದ ನೀರಿನ ಸಮಸ್ಯೆ ಹೆಚ್ಚಾಗಿದ್ದು, ತಕ್ಷಣ ಮಲಘಾಣ ಪಶ್ಚಿಮ ಕಾಲುವೆಗೆ ನೀರು ಹರಿಸಬೇಕೆಂದು ಮನವಿ ಮಾಡಿದರು.