ವಿಜಯಪುರ:ಅಧಿಕಾರಿಗಳು ತೊಗರಿ ಬೆಳೆ ಬದಲಿಗೆ ಆನ್‌ಲೈನ್‌ನಲ್ಲಿ ಬೇರೆ ಬೆಳೆ ನೋಂದಣಿ ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿದರು.ಜನವರಿ 31ರವರೆಗೂ ತೊಗರಿ ಬೆಳೆ ಆನ್ಲೈನ್ ನೋಂದಣಿ ಪ್ರಕ್ರಿಯೆ ಇರಲಿದೆ.
ತೊಗರಿ ಇ-ನೋಂದಣಿ ಪ್ರಕ್ರಿಯೆಯಲ್ಲಿ ತಪ್ಪು ಮಾಹಿತಿ.. ನೊಂದ ರೈತರ ಪ್ರತಿಭಟನೆ
ತೊಗರಿ ಬೆಳೆ ಖರೀದಿ ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಅಧಿಕಾರಿಗಳು ತಪ್ಪು ಮಾಹಿತಿ ತೋರಿಸುತ್ತಿದ್ದಾರೆ ಎಂದು ಆರೋಪಿಸಿ ವಿಜಯಪುರದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ತೊಗರಿಗೆ ಬೆಂಬಲ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ತೊಗರಿ ಬೆಳೆಗೆ ₹6,100 ಬೆಲೆ ನಿಗದಿ ಮಾಡಿದೆ. ಅದಕ್ಕಾಗಿ ಜಿಲ್ಲೆಯಲ್ಲಿ 100ಕ್ಕೂ ಅಧಿಕ ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಿದೆ. ಆದರೆ, ಅಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡದೆ ಸಮೀಕ್ಷೆ ಮಾಡುತ್ತಿದ್ದಾರೆ. ಅಲ್ಲದೆ ಜಮೀನಿನಲ್ಲಿ ತೊಗರಿ ಬೆಳೆದರೆ ಅಧಿಕಾರಿಗಳು ಕಡಲೆ ಎಂದು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಿರುವ ಎಡವಟ್ಟು ಸರಿಪಡಿಸಿ ಅಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡಿ ತೊಗರಿ ಬೆಳೆ ಕುರಿತು ಆನ್‌ಲೈನ್‌ನಲ್ಲಿ ನಿಖರ ಮಾಹಿತಿ ತೋರಿಸಬೇಕು ಎಂದು ಆಗ್ರಹಿಸಿದರು. ಈ ಕುರಿತು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಅವರಿಗೆ ರೈತರು ಮನವಿ ಸಲ್ಲಿಸಿದರು.
TAGGED:
ರೈತರು ಪ್ರತಿಭಟನೆ